ಕಾರಂತ ಥೀಮ್ ಪಾರ್ಕ್ ನಲ್ಲಿ ಮುದ್ದು ಮುಕಂದ ಸ್ಪರ್ಧೆ
ಕಾರಂತ ಪ್ರತಿಷ್ಠಾನ (ರಿ) ಕೋಟ ಡಾ|| ಕಾರಂತ ಟ್ರಸ್ಟ್ (ರಿ) ಉಡುಪಿ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇವರ ಆಶ್ರಯದಲ್ಲಿ ಕಾರಂತ ಕಾರಂತ ಥೀಮ್ ಪಾರ್ಕ್ ನಲ್ಲಿ ಸೆಪ್ಪೆಂಬರ್ 9 ರಂದು ಮುದ್ದು ಮುಕುಂದ ವೇಷ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಅಧ್ಯಕ್ಷರಾದ ಶ್ರೀಮತಿ ಸುಲಾತ ಹೆಗ್ಡೆ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಘು ತಿಂಗಳಾಯ, ಕಾರಂತ ಪ್ರತಿಷ್ಠಾನದ ಟ್ರಸ್ಟಿಗಳಾದ ಸುಬ್ರಾಯ್ ಆಚಾರ್ ಶ್ರೀಮತಿ ಸುಶೀಲಾ ಸೋಮಶೇಖರ್ ,ಸಾಂಸ್ಕ್ರತಿಕ ಚಿಂತಕ ವೇಂಕಟೇಶ್ ಭಟ್ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಕಾರ್ಯದರ್ಶಿ ಶ್ರೀ ಮತಿ ಲೀಲಾವತಿ ಗಂಗಾಧರ್ ಹಾಗೂ ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.
ಸ್ಪರ್ಧಾ ಕಾರ್ಯಕ್ರಮದ ನಂತರ ವಿಜೇತಾ ಪುಟಾಣಿಗಳಿಗೆ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದಾರ್ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಸುಮಾರು 140 ಪುಟಾಣಿಗಳು ಸ್ಪರ್ಧಾಳುಗಳಾಗಿ ಭಾಗವಹಿಸಿದ್ದರು.