ಕೋಟ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಶೆಟ್ಟಿ, ಭೇಟಿ ನೀಡಿದರು. ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರಂತ ಥೀಮ್ ಪಾರ್ಕ್ ನ ಆರ್ಟ ಗ್ಯಾಲರಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು.ನಡೆದಾಡುವ ವಿಶ್ವಕೋಶ ಖ್ಯಾತಿಯ ಡಾ|| ಶಿವರಾಮ ಕಾರಂತರ ನೆನಪಿನಲ್ಲಿ ಸ್ಮಾರಕ ಭವನ ನಿರ್ಮಿಸಿ ಕಾರಂತರ ನೆನಪುಗಳನ್ನು ಶಾಶ್ವತವಾಗಿ ಇರುವಂತೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕ ಭೋಜರಾಜ ಶೆಟ್ಟಿ ಕಾರಂತ ಪ್ರತಿಷ್ಠಾನದ ಸದಸ್ಯ ಮಣೂರು ಸುಬ್ರಾಯ ಆಚಾರ್, ಕೋಟ ಶ್ರೀನಿವಾಸ ಪೂಜಾರಿಯವರ ಆಪ್ತ ಸಹಾಯಕ ಶ್ರೀ ಹರೀಶ ಶೆಟ್ಟಿ ಹಾಗೂ ವಿವೇಕ್ ಅಮೀನ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಿಮ ಶೆಟ್ಟಿ, ಆದರ್ಶ ಶೆಟ್ಟಿ ಕೊರ್ಗಿ ಉಪಸ್ಥಿತರಿದ್ದರು.