ಕಾರಂತ ಥೀಮ್ ಪಾರ್ಕ್ ಗೆ ಸಂತೋಷ್ ಜಿ. ಭೇಟಿ
ಕೋಟ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಬಿಜೆಪಿ ರಾಷ್ಟ್ರೀಯ ಸಹ ಸಂಘಟನ ಕಾರ್ಯದರ್ಶಿ ಶ್ರೀ ಸಂತೋಷ್ ಜಿ ಅವರು ಕಾರಂತ ಥೀಮ್ ಪಾರ್ಕ್ ಭೇಟಿ ನೀಡಿದರು. ಕೆರೆಯ ಮಧ್ಯದಲ್ಲಿರುವ ಕಾರಂತರ ಕಂಚಿನ ಪ್ರತಿಮೆಗೆ ಹೂ ಮಾಲೆ ಹಾಕಿ ಥೀಮ್ ಪಾರ್ಕ್ ಗ್ರಂಥಾಲಯ, ರಂಗ ಮಂದಿರ,ಆರ್ಟ್ ಗ್ಯಾಲರಿ ವೀಕ್ಷಿಸಿದರು. ಕೆಲವೊಂದು ಸ್ಥಳಗಳಿಗೆ ಮತ್ತೆ ಮತ್ತೆ ಭೇಟಿ ನೀಡಲು ಮನಸ್ಸು ಪ್ರೇರೇಪಿಸುತ್ತದೆ ಅಂತಹ ಸ್ಥಳಗಳಲ್ಲಿ ಕಾರಂತ ಥೀಮ್ ಪಾರ್ಕ್ ಕೂಡಾ ಒಂದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೇಳೂರು ರಾಘವೇಂದ್ರ ಶೆಟ್ಟಿ, ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು,ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.