ಕಾರಂತ ಥೀಮ್ ಪಾರ್ಕ್ ಉಡುಪಿ ಜಿಲ್ಲಾಧಿಕಾರಿ ಭೇಟಿ
ಕೋಟ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಹೆಬ್ಸಿಭಾ ರಾಣಿ ಕೊರ್ಲಪಾಟಿ ಭೇಟಿ ನೀಡಿದರು. ಕಾರಂತರ ಮೂರ್ತಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ಸಂದರವಾಗಿ ನಿರ್ಮಾಣವಾಗಿದ್ದು ದಿನನಿತ್ಯ ಕಾರ್ಯಕ್ರಮ, ತರಭೇತಿ ನಡೆಯುತ್ತಿರುವುದು ಸಂತಸದ ವಿಷಯ. ಮುಂದಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಘು ತಿಂಗಳಾಯ, ನಿರ್ಮಿತಿ ಕೇಂದ್ರ ಉಡುಪಿಯ ಅರುಣ್ ಕುಮಾರ್ ಹಾಗೂ ಕಾರಂತ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು, ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.