ಕೋಟ: ಡಾ|| ಕಾರಂತ ಪ್ರತಿಷ್ಠಾನ(ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ನಡೆಯುವ 15 ನೇ ವರ್ಷದ ಕಾರಂತೋತ್ಸವದ ಶೀರ್ಷಿಕೆಯನ್ನು ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ಪರಸ್ಕೃತೆ ಶ್ರೀಮತಿ ಬೆಳ್ಳಿ ಬಾಯಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.



ಈ ಸಂದರ್ಭದಲ್ಲಿ ಮಾನ್ಯ ಮುಜರಾಯಿ,ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ,ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್,ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಘು ತಿಂಗಳಾಯ,ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ,ಕಾರಂತ ಪ್ರತಿಷ್ಠಾನದ ಸದಸ್ಯರು,ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

