ಯಕ್ಷಗಾನಕ್ಕೆ ಕಾರಂತರ ಕೊಡುಗೆ ಅವಿಸ್ಮರಣೀಯ -ಶ್ರೀ ಅಂಬಾತನಯ ಮುದ್ರಾಡಿ

ಕೋಟ : ಡಾ|| ಶಿವರಾಮ ಕಾರಂತರು ಯಕ್ಷಗಾನ ಕ್ಷೇತ್ರಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ, ಯಕ್ಷಗಾನ ಬ್ಯಾಲೆ ಮೂಲಕ ವಿದೇಶಗಳಲ್ಲಿ ಯಕ್ಷಗಾನದ ಕಂಪನ್ನು ಪಸರಿಸಿದವರು ಕಾರಂತರು ಅಂತಹ ವ್ಯಕ್ತಿ ಹೆಸರಿನಲ್ಲಿ ಈ ಕಾರಂತ ಥೀಮ್ ಪಾರ್ಕ್ ಗ ಚಟುವಟಿಕೆ ನಡೆಸುತ್ತಿರುವ ಶ್ಲಾಘನೀಯ ಎಂದು ಹಿರಿಯ ಸಾಹಿತಿ ಶ್ರೀ ಅಂಬಾತನಯ ಮುದ್ರಾಡಿ ಅವರು ಹೇಳಿದರು.
ಅವರು ಇತ್ತೀಚೆಗೆ ಕೋಟದ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರ್ಟ್ ಗ್ಯಾಲರಿ, ರಂಗ ಮಂದಿರ , ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ನಮ ತುಳುವೆರ್ ಸಂಘಟನೆಯ ಶ್ರೀ ಸುಕುಮಾರ್ ಮುದ್ರಾಡಿ, ಕಾರಂತ ಥೀಮ್ ಪಾರ್ಕ್ ಗೆ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಯಕ್ಷಗಾನ ಗುರು ಶ್ರೀ ಸುಬ್ರಹ್ಮಣ್ಯ ಪ್ರಸಾದ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀಮತಿ ಲಲಿತಾ ಮತ್ತಿತ್ತರು ಉಪಸ್ಥಿತರಿದ್ದರು.

