ರಾಜ್ಯದ ಮೊದಲ ಆನ್ ಲೈನ್ ಸಾಹಿತ್ಯಕ -ಸಾಂಸ್ಕೃತಿಕ ಸಮ್ಮೇಳನ ಹಾಂಪರಿ-2020(ಬದಲಾವಣೆಯ ಕರೆಗಾಳಿ)
ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಇವರ ಸಹಯೋಗದಲ್ಲಿ ಡಾ|| ಶಿವರಾಮ ಕಾರಂತರ ಪುಣ್ಯತಿಥಿ ಅಂಗವಾಗಿ ರಾಜ್ಯದ ಮೊದಲ ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ಹಾಂಪರಿ-2020 (ಬದಲಾವಣೆಯ ಕರೆಗಾಳಿ ) ಕೋಟದ ಕಾರಂತ ಥೀಮ್ಪಾರ್ಕ್ ನಲ್ಲಿ ಡಿಸೆಂಬರ್ 6 ರ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5ರ ತನಕ ನಡೆಯಲಿದೆ. ವಿಚಾರಗೋಷ್ಠಿ, ಪ್ರಬಂಧ ಮಂಡನೆ, ಕವಿಗೋಷ್ಠಿ, ನಾಟಕಾಂಶ ಪ್ರದರ್ಶನ, ಜನಪದ ಗುಂಜನ, ಕನ್ನಡ ಗೀತ ಗಾಯನ, ಯಕ್ಷನೃತ್ಯ, ಬಹುವಿಧ ಅಭಿವ್ಯಕ್ತಿ, ಏಕವ್ಯಕ್ತಿ ಸ್ವರಾಂಜಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಡಾ|| ಕಾರಂತ ಪ್ರತಿಷ್ಠಾನದ ಕಾಯರ್ಾಧ್ಯಕ್ಷ ಶ್ರೀ ಆನಂದ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಡಾ.ಅರುಣ್ ಕುಮಾರ್ ಶೆಟ್ಟಿ, ಥೀಮ್ ಪಾರ್ಕ್ ನ ವಿಶೇಷಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶ್ರೀಮತಿ ಶೈಲಾ ಎಸ್ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

