ಯುವ ಬರಹಗಾರರಿಗೆ ಪ್ರೋತ್ಸಾಹ ಅಗತ್ಯ :ಶ್ರೀ ಆನಂದ್ ಸಿ ಕುಂದರ್

ಕೋಟ : ಯುವ ಬರಹಗಾರನ್ನು ಪ್ರೋತ್ಸಾಹಿಸಿ ಮುಖ್ಯವಾಹಿನಿಗೆ ತಂದಾಗ ಅವರಲ್ಲಿರುವ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯ, ಈ ನಿಟ್ಟಿನಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಇನ್ನಷ್ಟೂ ಸಾಹಿತ್ಯಿಕ ಚಟುವಟಿಕೆ, ವಿವಿಧ ಸಮ್ಮೇಳನಗಳನ್ನು ಆಯೋಜಿಸುವ ಯೋಜನೆ ಹಾಕಲಾಗುವುದು ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ, ಶ್ರೀಕ್ಷೇತ್ರ ಅಮೃತೇಶ್ವರಿ ದೇವಸ್ಥಾನದ ಧರ್ಮದರ್ಶಿ ಶ್ರೀ ಆನಂದ್ ಸಿ ಕುಂದರ್ ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆದ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್(ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ, ಅಕ್ಷರ ಜ್ಯೋತಿ ಗಝಲ್ ಬಳಗ, ಉಡುಪಿ ಜಿಲ್ಲೆ ಅವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮೊದಲ ಗಝುಲ್ ಕವಿಗೋಷ್ಠಿ ಮತ್ತು ಮ್ಯಾಂಡಲಿನ್ ನಿನಾದ ಸಂಕ್ರಮಣ-2021(ತಂಪೆರೆವ ಬಿನ್ನಾಣ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಕ್ಷರ ಜ್ಯೋತಿ ಗಝುಲ್ ಬಳಗ ಮುಖ್ಯ ಗಣೇಶ್ ಪ್ರಸಾದ ಪಾಂಡೇಲು ಮಾತನಾಡಿ ಕಾರಂತ ಥೀಮ್ ಪಾರ್ಕ್ ನಲ್ಲಿ ದಿನನಿತ್ಯ ಎಂಬಂತೆ ಗಝುಲ್ ಸಮ್ಮೇಳನದಂತಹ ಚಟುವಟಿಕೆಗಳು ನಡೆಯುತ್ತಿರುವುದರಿಂದ ಹೊಸ ಪ್ರತಿಭೆಗಳ ಉಗಮಕ್ಕೆ ವೇದಿಕೆಯಾಗುತ್ತಿದೆ ಅಲ್ಲದೇ ಥೀಮ್ ಪಾರ್ಕ್ ನಲ್ಲಿ ಅಭಿವೃದ್ಧಿ ಕಾರ್ಯಗಳು ಸಾಹಿತ್ಯಾಸಕ್ತರನ್ನು ಆಕರ್ಷಿ ಸುವುದರಲ್ಲಿ ಅನುಮಾನವಿಲ್ಲ, ಇದರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೆಲಸ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿಗಳಾದ ಶ್ರೀ ಇಬ್ರಾಹಿಂ ಸಾಹೇಬ್ ಕೋಟ, ಶ್ರೀ ಸುಬ್ರಾಯ್ ಆಚಾರ್ಯ ಕೋಟ, ಶ್ರೀಮತಿ ಸುಶೀಲ ಸೋಮಶೇಖರ್ , ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಪ್ತ ಸಹಾಯಕ ಶ್ರೀ ಹರೀಶ್ ಕುಮಾರ್ ಶೆಟ್ಟಿ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಪ್ರಸ್ತಾಪಿಸಿ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಶ್ರೀ ರಾಜು ಬೀಜಾಡಿಯವರಿಂದ ಮ್ಯಾಂಡಲೀನ್ ನಿನಾದ ಕಾರ್ಯಕ್ರಮ ನಡೆಯಿತು.

