ಉಡುಪಿ ಜಿಲ್ಲಾ ಮಟ್ಟದ ಮೊದಲ ಯುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷರಾಗಿ ಶ್ರೀ ಪಿ.ವಿ. ಆನಂದ ಸಾಲಿಗ್ರಾಮ ಆಯ್ಕೆ

ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ಮಾರ್ಚ್ 21 ರಂದು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮೊದಲ ಯುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷರಾಗಿ ಶಿಕ್ಷಕ, ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಪಿ.ವಿ ಆನಂದ ಸಾಲಿಗ್ರಾಮ ಅವರನ್ನು ಆಯ್ಕೆ ಮಾಡಲಾಗಿದೆ. ಸೃಜನಶೀಲ ಅಭಿವ್ಯಕ್ತಿ, 29 ಯಕ್ಷಗಾನ ಪ್ರಸಂಗ ರಚನೆ, ಸಾಹಿತ್ಯದ ವಿವಿಧ ಮೌಲಿಕ ಕೃತಿಗಳ ರಚನೆ ಮತ್ತು ಸಾಂಸ್ಕೃತಿಕ ವಲಯವನ್ನು ಗುರುತಿಸುವಲ್ಲಿ ಮತ್ತು ಬೆಳೆಸುವಲ್ಲಿ ಅತೀ ಹೆಚ್ಚು ಪ್ರಯತ್ನಶೀಲರಾಗಿ, ಈಗಾಗಲೇ ಸಾಹಿತ್ಯ ಲೋಕದ -ಸಾಹಿತ್ಯ ರಂಗದಲ್ಲಿ ಧ್ರುವತಾರೆಯಾಗಿ ಮಿಂಚಿದ ಪಿ.ವಿ ಆನಂದ ಸಾಲಿಗ್ರಾಮ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

