ತೂಗು ಸೇತುವೆಯ ಹರಿಕಾರ ಶ್ರೀ ಗಿರೀಶ್ ಭಾರಧ್ವಜ್ ಅವರಿಗೆ
ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ
ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.
ಈಗಾಗಲೇ ಶ್ರೀಯುತರಾದ ಶ್ರೀ ವೀರಪ್ಪ ಮೊಯ್ಲಿ, ಶ್ರೀ ವೆಂಕಟಾಚಲ, ಶ್ರೀ ಕೆ.ರಾಮಕೃಷ್ಣ ಹಂದೆ, ಶ್ರೀ ರವಿ ಬೆಳಗೆರೆ, ಶ್ರೀ ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಶ್ರೀ ಮೋಹನ ಆಳ್ವ, ಶ್ರೀಮತಿ ಸಾಲು ಮರದ ತಿಮ್ಮಕ್ಕ, ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ, ಶ್ರೀ ಜಯಂತ ಕಾಯ್ಕಿಣಿ, ಶ್ರೀ ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2021ರ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ “ಗಿರೀಶ್ ಭಾರದ್ವಾಜ್” ಅವರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆೆ. “ಸೇತುಬಂಧು” ಎಂದೇ ಕರೆಯಲ್ಪಡುವ ಗಿರೀಶ್ ಭಾರದ್ವಾಜ್ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸುವಂತೆ 130 ತೂಗು ಸೇತುವೆ ನಿಮರ್ಾಣ ಮಾಡಿದವರು. ಅಲ್ಲದೇ ಸಮಾಜ ಸೇವೆಯಲ್ಲೂ ಕ್ರೀಯಾಶೀಲರಾದವರು. ಇವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ.
ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಅಕ್ಟೋಬರ್ ಒಂದರಿಂದ ಹತ್ತರವರೆಗೆ ಹತ್ತು ದಿನಗಳ ಸಾಂಸ್ಕೃತಿಕ- ಸಾಹಿತ್ಯಿಕ ಸುಗ್ಗಿ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿದೆ. ಕಾರಂತ ಚಿಂತನ,-ನೃತ್ಯ ಪ್ರದರ್ಶನ, ಸಂಗೀತ ಸುಧೆ-ಯಕ್ಷ-ನಾಟ್ಯ-ವೈಭವ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕಾರಂತ ಥೀಮ್ ಪಾಕರ್್ ಯುಟ್ಯೂಬ್ ಹಾಗೂ ಪೇಸ್ ಬುಕ್ ಪೇಜ್ ನಲ್ಲಿ ಪ್ರಸಾರಗೊಳ್ಳಲಿದೆ.