ಕಾರಂತ ಥೀಮ್ ಪಾರ್ಕ್ ನಲ್ಲಿ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ
ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ ವತಿಯಿಂದ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಮಾತಾಡ್ ಮಾತಾಡ್ ಕನ್ನಡ -ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದ ಕಾರಂತ ಥೀಮ್ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಅವರು ಕನ್ನಡ ನಾಡು ನುಡಿ ಬಗ್ಗೆ ವಿಶೇಷ ಅಭಿಮಾನ ಹೊಂದಿ ಗೌರವ ನೀಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ನಮ್ಮ ಮಕ್ಕಳಿಗೂ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ ಭಾಷೆಯ ಮಹತ್ವ ತಿಳಿಸುವ ಕೆಲಸವಾಗಬೇಕಿದೆ, ಈ ಕಾರ್ಯಕ್ರಮದ ಮೂಲಕ ಕನರ್ಾಟಕ ಮಾತ್ರವಲ್ಲದೇ ದೇಶ ವಿದೇಶದಲ್ಲಿಯೂ ಕನ್ನಡದ ಕಂಪನವಾಗುತ್ತದೆ ಎಂದರು.
ಕೋಟತಟ್ಟು ಗ್ರಾಮ ಪಂಚಾಯತ್ ಪಿಡಿಓ ಶೈಲಾ ಎಸ್ ಪೂಜಾರಿ ಅವರು ಮಾತನಾಡಿ ಕನ್ನಡ ಭಾಷೆಯ ಸೊಗಡು ಬಲು ವಿಶೇಷವಾದದ್ದು, ಕನ್ನಡ ಭಾಷೆ ಎಂಬುವುದು ನಾವು ಆಡುವ ಭಾಷೆ ಮಾತ್ರವಾಗಿರದೇ ಪ್ರತಿಯೊಬ್ಬ ಕನ್ನಡಿಗನ ಭಾವನ್ಮಾತಕ ವಿಚಾರವಾಗಿದೆ. ಕನ್ನಡ ನಾಡು ನುಡಿಯ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡು ನಮ್ಮಿಂದಲೇ ಎನ್ನುವಂತೆ ಬೆಳೆಸೋಣ ಎಂದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು, ಕೋಟತಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಕೋಟ ವಲಯದ ಅಂಗನವಾಡಿ ಕಾರ್ಯಕತರ್ೆ ಹಾಗೂ ಸಹಾಯಕರು, ಆಶಾ ಕಾರ್ಯಕತರ್ೆಯರು, ಸಂಜೀವಿನಿ ಸ್ವಸಹಾಯ ಮಹಿಳಾ ಸಂಘದ ಸದಸ್ಯರು, ವಿದ್ಯಾಥರ್ಿಗಳು ಉಪಸ್ಥಿತರಿದ್ದರು.