ಸಂವಿಧಾನದ ಮಹತ್ವ ಪ್ರತಿಯೊಬ್ಬರಿಗೂ ತಿಳಿಯಲಿ- ಶ್ರೀ ನಿತ್ಯಾನಂದ ಗಾಂವಕರ್
ಕೋಟ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ವಿಶೇಷ ಮನ್ನಣೆಯಿದೆ, ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಮಹತ್ವ ಅರಿತುಕೊಳ್ಳುವುದು ಅವಶ್ಯವಾಗಿದೆ, ರಂಗಭೂಮಿ ಮೂಲಕ ಸಂವಿಧಾನದ ಅರಿವು ಮೂಡಿಸುತ್ತಿರುವ ಕೆಲಸ ಶ್ಲಾಘನೀಯ ಎಂದು ಲಕ್ಷಿö್ಮÃ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀ ನಿತ್ಯಾನಂದ ಗಾಂವಕರ್ ಅವರು ಹೇಳಿದರು.
ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಲಕ್ಷಿö್ಮÃ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಮಣೂರು-ಪಡುಕೆರೆ ಸಹಯೋಗದಲ್ಲಿ ರಂಗಾಯಣ ಶಿವಮೊಗ್ಗ ಕಲಾವಿದರ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಾಟಕದ ಮೂಲಕ ಮೂಲೆ ಮೂಲೆಯಲ್ಲೂ ಸಂವಿಧಾನದ ಕುರಿತು ಅರಿವು ಮೂಡಿಸುತ್ತಿರುವುದು ಸಂತಸದ ವಿಷಯ, ನಿರಂತರವಾಗಿ ಇದು ಸಾಗಿ ಪ್ರತಿಯೊಬ್ಬರು ಸಂವಿಧಾನದ ಮಹತ್ವ ಅರಿತು ಸಧೃಡ ಸಾಮಾಜದ ಶಿಲ್ಪಿಗಳಾಗೊಣ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್ ಅವರು ಹೇಳಿದರು.
ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷ ಶ್ರೀ ರಾಮಚಂದ್ರ ಐತಾಳ್, ಸಂಘಟಕ ಶ್ರೀ ಪ್ರಸಾದ್ ಬಿಲ್ಲವ, ರಂಗಾಯಣ ತಂಡದ ನಾಟಕ ಸಂಚಾಲಕರಾದ ಶ್ರೀ ಶೈಲೇಶ್ ತೀರ್ಥಹಳ್ಳಿ, ಲಕ್ಷಿö್ಮÃ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಪಾಲಕ ಶ್ರೀ ಕೃಷ್ಣ ಸಾಸ್ತಾನ, ಹಾಗೂ ಕಾಲೇಜಿನ ಪ್ರಾಧ್ಯಾಪಕ ವೃಂದದವರು, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿ ನಿರೂಪಿಸಿದರು.