ಪೂರ್ವಜರ ಸ್ವಾತಂತ್ರ್ಯ ಹೋರಾಟ ಸ್ಮರಿಸುವ ಕೆಲಸವಾಗಲಿ-ಶ್ರೀ ನಿತ್ಯಾನಂದ ಶ್ಯಾನುಭಾಗ್
ಕೋಟ : ನಮಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ನಮ್ಮ ಪೂರ್ವಜರ ತ್ಯಾಗ ಬಲಿದಾನ ಮಹತ್ವವಾದುದು, ಅವರ ಹೋರಾಟದ ಫಲವಾಗಿ ನಾವು ನೆಮ್ಮದಿಯಿಂದ ಬದುಕು ಸಾಗಿಸುವಂತಾಗಿದೆ, ಅವರನ್ನು ಸ್ಮರಿಸುವ ಕಾರ್ಯವಾಗಬೇಕು ಅಲ್ಲದೇ ಥೀಮ್ ಪಾರ್ಕ್ನಲ್ಲಿ ಮಕ್ಕಳಿಗೆ ಸಂಬAಧಿಸಿದ ಕಾರ್ಯಕ್ರಮ ಹೆಚ್ಚಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕ ಉದ್ಯಮಿ ಶ್ರೀ ನಿತ್ಯಾನಂದ ಶ್ಯಾನುಭಾಗ್ ಅವರು ಹೇಳಿದರು.
ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಯು ಚಾನೆಲ್ ಸಾರಥ್ಯದಲ್ಲಿ ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಮಾತನಾಡಿ ೭೫ ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮನೆ ಮನೆ ಮೇಲೆ ತ್ರಿವರ್ಣ ಧ್ವಜ ಹಾಗೂ ಸಾಹಿತ್ಯಿಕ- ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಎಲ್ಲರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್ , ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.