ಕಾರಂತ ಥೀಮ್ ಪಾರ್ಕ್ ಗೆ ಕಾಂತರ ನಟಿ ಸಪ್ತಮಿ ಗೌಡ ಭೇಟಿ
ಕೋಟ : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಕಾಂತರ ಸಿನಿಮಾದ ಖ್ಯಾತ ನಟಿ ಸಪ್ತಮಿ ಗೌಡ ಭೇಟಿ ನೀಡಿದರು. ಕಾರಂತರ ನೆನಪಿನಲ್ಲಿ ಥೀಮ್ ಪಾರ್ಕ್ ನಿರ್ಮಾಣದ ಮೂಲಕ ಅವರ ಬದುಕಿನ ಪುಟಗಳನ್ನು ಮುಂದಿನ ಜನಾಂಗ ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗಮAದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಸಂಗೀತ ಕಾರಂಜಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ನಟಿ ತಾಯಿ ಶ್ರೀಮತಿ ಶಾಂತ, ವಿಧಾನ ಪರಿಷತ್ ವಿಪಕ್ಷ ನಾಯಕರ ಆಪ್ತ ಸಹಾಯಕ ಶ್ರೀ ಹರೀಶ್ ಕುಮಾರ್ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ, ಪಬ್ಲಿಕ್ ಸ್ಕೂಲ್ ಕೋಟೇಶ್ವರದ ಸಹ ಶಿಕ್ಷಕಿ ಶ್ರೀಮತಿ ಚೈತ್ರ ಬಿ ಶೆಟ್ಟಿ, ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.