ಡಾ|| ಶಿವರಾಮ ಕಾರಂತ ಶಿ ಕ್ಷಕ ಪುರಸ್ಕಾರಕ್ಕೆ ಆಯ್ಕೆ
ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ )ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಸರೆಯಲ್ಲಿ ಕೊಡಮಾಡುವ ಡಾ|| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಸ.ಹಿ.ಪ್ರಾ.ಶಾಲೆ ಸಾಸ್ತಾವು ಪ್ರಭಾರ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾÊಬ್ರಕಟ್ಟೆ ಶಿಕ್ಷಕ ಸುರೇಂದ್ರ ಕೋಟ, ವಿವೇಕ ಪದವಿ ಪೂರ್ವ ಕಾಲೇಜು ಮತ್ತು ಫ್ರೌಡಶಾಲೆ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ, ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಶಿಕ್ಷಕ ಮಂಜುನಾಥ, ಸ.ಹಿ.ಪ್ರಾ. ಶಾಲೆ ಉಪ್ಪೂರು ಬ್ರಹ್ಮಾವರ ಶಿಕ್ಷಕಿ ಶ್ರೀಮತಿ ಚೆಲುವ ಕುಮಾರಿ, ಸ.ಹಿ.ಪ್ರಾ. ಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕ ಶೇಖರ್, ಸರಕಾರಿ ಫ್ರೌಡಶಾಲೆ ಕುಕ್ಕೆಹಳ್ಳಿ ಶಿಕ್ಷಕಿ ಲಿನಟ್ ವಾರ್ತಾ ಡಿಸೋಜ, ಸ.ಹಿ.ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಶಿಕ್ಷಕಿ ಚಂದ್ರಮತಿ ದೇವಾಡಿಗ, ಸರಕಾರಿ ಫ್ರೌಡಶಾಲೆ ಕಾವಡಿ ಶಿಕ್ಷಕ ಪ್ರಶಾಂತ್ ಜತ್ತನ್, ಸರಕಾರಿ ಸಂಯುಕ್ತ ಫ್ರೌಡಶಾಲೆ(ಪ್ರಾಥಮಿಕ ಭಾಗ)ಮಣೂರು ದೈಹಿಕ ಶಿಕ್ಷಕ ನಾರಾಯಣ ಮೋಗವೀರ ಅವರು ಆಯ್ಕೆಯಾಗಿದ್ದಾರೆ. ಪುರಸ್ಕಾರವನ್ನು ಸೆಪ್ಟೆಂಬರ್ 16 ರಂದು ಸಂಜೆ 3 ಗಂಟೆಗೆ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಕೆ ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.