*ಕಾರಂತ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
ಕೋಟ : ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ 2024ನೇ ಸಾಲಿನ ಕಾರಂತ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಫ್ರೌಡಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಥೀಮ್ ಪಾರ್ಕ್ ನಲ್ಲಿ ಪಡೆಯುವುದು ಅಥವಾ ಗ್ರಂಥಾಲಯ ಮೇಲ್ವಿಚಾರಕಿ ಶೈಲಜ ಕೆ ಎನ್ (+91 96 63 750499) ಅವರನ್ನು ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 12 ಸಂಜೆ 5 ಗಂಟೆ ಒಳಗೆ ಕೋಟದ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ ಬ್ರಹ್ಮಾವರ ತಾಲ್ಲೂಕು ಉಡುಪಿ ಜಿಲ್ಲೆ ಇವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.